ಗಣೇಶ ಚತುರ್ಥಿಯನ್ನು ಕುಟುಂಬದಲ್ಲಿ ಯಾರು ಆಚರಿಸಬೇಕು, ಗಣೇಶ ಚತುರ್ಥಿಯನ್ನು ಆಚರಿಸುವುದರ ಮಹತ್ವವೇನು, ಗಣೇಶ ಚತುರ್ಥಿಯಂದು ನೂತನ ಮೂರ್ತಿಯನ್ನು ಏಕೆ ತರಬೇಕು, ಗಣೇಶ ಮೂರ್ತಿಯು ಭಂಗವಾದರೆ ಅದರ ಪರಿಹಾರಗಳೇನು ಈ ವಿಷಯಗಳಿಗೆ ಸಂಬಂಧಪಟ್ಟ ಮಾಹಿತಿಯನ್ನು ಇಲ್ಲಿ ನೀಡುತ್ತಿದ್ದೇವೆ.
ಕುಟುಂಬದಲ್ಲಿ ಯಾರು ಆಚರಿಸಬೇಕು?
ಗಣೇಶ ಚತುರ್ಥಿಯಂದು ಆಚರಿಸಲಾಗುವ ವ್ರತವನ್ನು ‘ಸಿದ್ಧಿವಿನಾಯಕ ವ್ರತ’ ಎನ್ನುತ್ತಾರೆ. ವಾಸ್ತವದಲ್ಲಿ ಇದನ್ನು ಎಲ್ಲ ಕುಟುಂಬಗಳೂ ಆಚರಿಸಬೇಕು. ಅಣ್ಣತಮ್ಮಂದಿರೆಲ್ಲರೂ ಒಟ್ಟಿಗೆ ಇದ್ದರೆ, ಅಂದರೆ ಅವರ ದ್ರವ್ಯಕೋಶ ಮತ್ತು ಪಾಕನಿಷ್ಪತ್ತಿ (ಒಲೆ) ಒಟ್ಟಿಗೆ ಇದ್ದರೆ ಎಲ್ಲರೂ ಸೇರಿ ಒಂದೇ ಮೂರ್ತಿಯ ಪೂಜೆಯನ್ನು ಮಾಡಬೇಕು; ಆದರೆ ದ್ರವ್ಯಕೋಶ ಮತ್ತು ಪಾಕನಿಷ್ಪತ್ತಿಯು ಕಾರಣಾಂತರದಿಂದ ವಿಭಕ್ತವಾಗಿದ್ದರೆ (ಬೇರೆ ಬೇರೆ) ಪ್ರತಿಯೊಬ್ಬರೂ ಅವರವರ ಮನೆಗಳಲ್ಲಿ ಸ್ವತಂತ್ರವಾಗಿ ಗಣೇಶವ್ರತವನ್ನು ಆಚರಿಸಬೇಕು.
ಗಣೇಶಚತುರ್ಥಿಯ ಮಹತ್ವವೇನಿದೆ?
ಆಷಾಢ ಹುಣ್ಣಿಮೆಯಿಂದ ಕಾರ್ತಿಕ ಹುಣ್ಣಿಮೆಯವರೆಗಿನ ೧೨೦ ದಿನಗಳ ಕಾಲದಲ್ಲಿ ವಿನಾಶಕಾರೀ, ತಮಪ್ರಧಾನ ಯಮಲಹರಿಗಳು ಪೃಥ್ವಿಯ ಮೇಲೆ ಹೆಚ್ಚು ಪ್ರಮಾಣದಲ್ಲಿ ಬರುತ್ತವೆ. ಈ ಸಮಯದಲ್ಲಿ ಅವುಗಳ ತೀವ್ರತೆಯೂ ಹೆಚ್ಚಿಗೆ ಇರುತ್ತದೆ. ಈ ಕಾಲಾವಧಿಯಲ್ಲಿ, ಅಂದರೆ ಭಾದ್ರಪದ ಶುದ್ಧ ಚತುರ್ಥಿಯಿಂದ ಅನಂತ ಚತುರ್ದಶಿಯವರೆಗೆ ಗಣೇಶ ಲಹರಿಗಳು ಪೃಥ್ವಿಯ ಮೇಲೆ ಹೆಚ್ಚಿನ ಪ್ರಮಾಣದಲ್ಲಿ ಬರುವುದರಿಂದ ಯಮಲಹರಿಗಳ ತೀವ್ರತೆ ಕಡಿಮೆಯಾಗಲು ಸಹಾಯವಾಗುತ್ತದೆ.
ಈ ಲಹರಿಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ‘ಅಧ್ಯಾತ್ಮಶಾಸ್ತ್ರ : ಖಂಡ ೧೦-ಹಬ್ಬ,ಧಾರ್ಮಿಕ ಉತ್ಸವ ಮತ್ತು ವ್ರತಗಳು’ ಈ ಗ್ರಂಥದಲ್ಲಿ ಕೊಡಲಾಗಿದೆ.
ಈ ಲಹರಿಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ‘ಅಧ್ಯಾತ್ಮಶಾಸ್ತ್ರ : ಖಂಡ ೧೦-ಹಬ್ಬ,ಧಾರ್ಮಿಕ ಉತ್ಸವ ಮತ್ತು ವ್ರತಗಳು’ ಈ ಗ್ರಂಥದಲ್ಲಿ ಕೊಡಲಾಗಿದೆ.
ಗಣೇಶ ಚತುರ್ಥಿಯಂದು ನೂತನ ಶ್ರೀ ಗಣೇಶ ಮೂರ್ತಿಯನ್ನು ತರುವ ಹಿಂದಿನ ಉದ್ದೇಶವೇನು?
ಮನೆಯಲ್ಲಿ ಪೂಜೆಗಾಗಿ ಗಣಪತಿಯನ್ನು ಇಟ್ಟಿರುವಾಗಲೂ ನೂತನ ಮೂರ್ತಿಯನ್ನು ತರುವ ಉದ್ದೇಶವು ಮುಂದಿನಂತಿದೆ. ಗಣೇಶ ಚತುರ್ಥಿಯ ಸಮಯದಲ್ಲಿ ಗಣೇಶ ಲಹರಿಗಳು ಅತಿ ಹೆಚ್ಚಿನ ಪ್ರಮಾಣದಲ್ಲಿ ಪೃಥ್ವಿಯ ಮೇಲೆ ಬರುತ್ತವೆ. ನಿತ್ಯದ ಪೂಜೆಯಲ್ಲಿರುವ ಮೂರ್ತಿಯಲ್ಲಿ ಅವುಗಳ ಆವಾಹನೆ ಮಾಡಿದರೆ ಅದರಲ್ಲಿ ಬಹಳಷ್ಟು ಶಕ್ತಿ ಬರಬಹುದು. ಇಂತಹ ಹೆಚ್ಚು ಶಕ್ತಿ ಇರುವ ಮೂರ್ತಿಯ ಎಲ್ಲ ಬಗೆಯ ಪೂಜೆ-ಅರ್ಚನೆಗಳನ್ನು ವರ್ಷಪೂರ್ತಿ ಸರಿಯಾಗಿ ಮಾಡುವುದು ಕಠಿಣವಾಗಿರುತ್ತದೆ; ಏಕೆಂದರೆ ಅದಕ್ಕೆ ಕರ್ಮಕಾಂಡದ ಬಹಳಷ್ಟು ಬಂಧನಗಳನ್ನು ಪಾಲಿಸಬೇಕಾಗುತ್ತದೆ. ಈ ಕಾರಣಕ್ಕಾಗಿಯೇ ಗಣೇಶ ಲಹರಿಗಳನ್ನು ಆವಾಹನೆ ಮಾಡಲು ನೂತನ ಮೂರ್ತಿಯನ್ನು ಉಪಯೋಗಿಸಿ ನಂತರ ಅದನ್ನು ವಿಸರ್ಜನೆ ಮಾಡುತ್ತಾರೆ. ಗಣೇಶ ಲಹರಿಗಳಲ್ಲಿನ ಸತ್ತ್ವ, ರಜ ಮತ್ತು ತಮದ ಪ್ರಮಾಣವು ೫:೫:೫ ಹೀಗಿದ್ದರೆ ಸರ್ವಸಾಧಾರಣ ವ್ಯಕ್ತಿಯಲ್ಲಿ ಅದರ ಪ್ರಮಾಣವು ೧:೩:೫ ಹೀಗೆ ಇರುತ್ತದೆ; ಆದ್ದರಿಂದ ಸರ್ವಸಾಧಾರಣ ವ್ಯಕ್ತಿಯು ಗಣೇಶ ಲಹರಿಗಳನ್ನು ಹೆಚ್ಚು ಸಮಯದ ವರೆಗೆ ಗ್ರಹಣ ಮಾಡಲಾರನು.
(ಗಣಪತಿಯ ಮೂರ್ತಿಯನ್ನು ಅಧ್ಯಾತ್ಮಶಾಸ್ತ್ರಕ್ಕನುಸಾರವಾಗಿ ತಯಾರಿಸಿದರೆ ಅದರಲ್ಲಿ ಗಣೇಶತತ್ತ್ವವು ಹೆಚ್ಚಿನ ಪ್ರಮಾಣದಲ್ಲಿ ಆಕರ್ಷಿಸಲ್ಪಡುತ್ತದೆ. ಗಣೇಶ ಚತುರ್ಥಿಯ ದಿನ ಪೂಜಿಸಬೇಕಾದ ಗಣಪತಿಯ ಮೂರ್ತಿಯನ್ನು ಅಧ್ಯಾತ್ಮಶಾಸ್ತ್ರದಂತೆ ಹೇಗೆ ತಯಾರಿಸಬೇಕು ಎಂಬುದರ ಮಾಹಿತಿಯನ್ನು ಸನಾತನವು ಪ್ರಕಟಿಸಿರುವ ‘ಗಣಪತಿ’ ಎಂಬ ಗ್ರಂಥದಲ್ಲಿ ಕೊಡಲಾಗಿದೆ.)
(ಗಣಪತಿಯ ಮೂರ್ತಿಯನ್ನು ಅಧ್ಯಾತ್ಮಶಾಸ್ತ್ರಕ್ಕನುಸಾರವಾಗಿ ತಯಾರಿಸಿದರೆ ಅದರಲ್ಲಿ ಗಣೇಶತತ್ತ್ವವು ಹೆಚ್ಚಿನ ಪ್ರಮಾಣದಲ್ಲಿ ಆಕರ್ಷಿಸಲ್ಪಡುತ್ತದೆ. ಗಣೇಶ ಚತುರ್ಥಿಯ ದಿನ ಪೂಜಿಸಬೇಕಾದ ಗಣಪತಿಯ ಮೂರ್ತಿಯನ್ನು ಅಧ್ಯಾತ್ಮಶಾಸ್ತ್ರದಂತೆ ಹೇಗೆ ತಯಾರಿಸಬೇಕು ಎಂಬುದರ ಮಾಹಿತಿಯನ್ನು ಸನಾತನವು ಪ್ರಕಟಿಸಿರುವ ‘ಗಣಪತಿ’ ಎಂಬ ಗ್ರಂಥದಲ್ಲಿ ಕೊಡಲಾಗಿದೆ.)
ಮೂರ್ತಿಯು ಭಗ್ನವಾದರೆ ಏನು ಮಾಡಬೇಕು?
ಮೂರ್ತಿಯ ಪ್ರಾಣಪ್ರತಿಷ್ಠೆಯನ್ನು ಮಾಡುವುದಕ್ಕಿಂತ ಮೊದಲು ಯಾವು ದಾದರೊಂದು ಅವಯವಕ್ಕೆ ಏಟಾದರೆ ಅಥವಾ ಮುರಿದರೆ ಚಿಂತಿಸುವ ಕಾರಣವಿಲ್ಲ, ಅದರ ಬದಲು ಬೇರೆ ಮೂರ್ತಿಯನ್ನು ತಂದು ಪೂಜಿಸಬೇಕು. ವಿಸರ್ಜನೆಗಾಗಿ ಅಕ್ಷತೆ ಹಾಕಿದ ನಂತರ (ದೇವತ್ವವು ಹೋದ ನಂತರ) ಅವಯವಗಳಿಗೆ ಏಟಾದರೆ ಅಥವಾ ಮುರಿದರೆ ಆ ಮೂರ್ತಿಯನ್ನು ನಿತ್ಯದಂತೆ ವಿಸರ್ಜನೆ ಮಾಡಬೇಕು. ಪ್ರಾಣಪ್ರತಿಷ್ಠೆಯಾದ ನಂತರ ಅವಯವಕ್ಕೆ ಏಟಾದರೆ ಅಥವಾ ಮುರಿದರೆ ಆ ಮೂರ್ತಿಗೆ ಅಕ್ಷತೆಯನ್ನು ಅರ್ಪಿಸಿ ವಿಸರ್ಜಿಸಬೇಕು. ಈ ಘಟನೆಯು ಗಣೇಶ ಚತುರ್ಥಿಯ ದಿನವೇ ನಡೆದರೆ ಬೇರೆ ಮೂರ್ತಿಯನ್ನು ತಂದು ಪೂಜಿಸಬೇಕು. ಎರಡನೆಯ ಅಥವಾ ಮೂರನೆಯ ದಿನ ನಡೆದರೆ ಹೊಸ ಮೂರ್ತಿಯನ್ನು ತಂದು ಪೂಜಿಸಬೇಕಾಗಿಲ್ಲ. ಮೂರ್ತಿಯು ಸಂಪೂರ್ಣ ಭಂಗವಾದರೆ ಕುಲಪುರೋಹಿತರ ಸಲಹೆಯಂತೆ ಯಥಾವಕಾಶ ‘ಅದ್ಭುತ ದರ್ಶನ ಶಾಂತಿ’ಯನ್ನು ಮಾಡಿಸಬೇಕು. ಗಣೇಶ ಚತುರ್ಥಿಯ ದಿನ ದೀಪಪತನ (ದೀಪ ಆರಿ ಹೋಗುವುದು), ಅರೆಯುವ ಕಲ್ಲು, ಬೀಸುವ ಕಲ್ಲು ಅಥವಾ ಸಾಣೆಕಲ್ಲು ಒಡೆದು ಹೋಗುವುದು, ಕೆಸುವಿನ ಎಲೆಗೆ ಹೂವು ಬರುವುದು, ಮೂರ್ತಿಭಂಗ ಇತ್ಯಾದಿ ಘಟನೆಗಳಾದರೆ ಆ ಕುಟುಂಬದಲ್ಲಿ ದ್ರವ್ಯಹಾನಿ, ಗಂಭೀರ ರೋಗ ಅಥವಾ ಅಪಮೃತ್ಯು ಆಗುವ ಸಾಧ್ಯತೆ ಇರುತ್ತದೆ; ಅದಕ್ಕಾಗಿ ಮೇಲೆ ಕೊಟ್ಟಿರುವ ಪರಿಹಾರಗಳನ್ನು ಶ್ರದ್ಧೆಯಿಂದ ಮಾಡಬೇಕು. (ಹೆಚ್ಚಿನ ಮಾಹಿತಿಗಾಗಿ ಸನಾತನವು ಪ್ರಕಾಶಿಸಿದ ‘ಗಣಪತಿ’ ಈ ಗ್ರಂಥವನ್ನು ಓದಿ)
No comments:
Post a Comment